ಗೋಣಿಕೊಪ್ಪಲು, ಆ. 5: ಅಪರಿಚಿತ ವ್ಯಕ್ತಿಯೋರ್ವನಿಗೆ ಅಪಘಾತ ಸಂಭವಿಸಿದ್ದು ಈತನನ್ನು ಮಡಿಕೇರಿಯ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಸೇರಿಸಲಾಗಿದೆ. ತಾ.4ರ ರಾತ್ರಿ 11 ಗಂಟೆ ಸುಮಾರಿಗೆ ಬಾಳೆಲೆ, ಪೊನ್ನಪ್ಪಸಂತೆ ಮುಖ್ಯ ರಸ್ತೆಯಲ್ಲಿ ಅಪರಿಚಿತ ವ್ಯಕ್ತಿಗೆ ಅಪಘಾತ ಸಂಭವಿಸಿದ್ದು, ಕಾಲು ಮುರಿದಿದೆ. ರಸ್ತೆ ಬದಿಯಲ್ಲಿ ನರಳಾಡುತ್ತಿದ್ದ ಈತನನ್ನು ಗಮನಿಸಿದ ವ್ಯಕ್ತಿಯೊಬ್ಬರು ಪೊನ್ನಂಪೇಟೆ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.
ಪೊನ್ನಂಪೇಟೆ ಪೊಲೀಸರು ಸ್ಥಳಕ್ಕೆ ತೆರಳಿ ಗಾಯಾಳುವನ್ನು ಗೋಣಿಕೊಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿಯ ಆಸ್ಪತ್ರೆಗೆ ಸೇರಿಸಿದರು. ಅಪಘಾತಗೊಂಡಿರುವ ವ್ಯಕ್ತಿಯ ವಿಳಾಸ ಇನ್ನೂ ಕೂಡ ಪೊಲೀಸರಿಗೆ ಲಭ್ಯವಾಗಿಲ್ಲ. ಈತನ ಮಾಹಿತಿ ಇದ್ದವರು ಪೊನ್ನಂಪೇಟೆ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದೆಂದು ಅಧಿಕಾರಿಗಳು ತಿಳಿಸಿದ್ದಾರೆ.