ಪೊನ್ನಂಪೇಟೆ. ಆ. 5: ತಾ.11 ರಂದು ಬೇಗೂರಿನ ಪಟ್ಟಕೇರಿ ಅಂಬಲ ಒಕ್ಕೂಟದ ವತಿಯಿಂದ 4 ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟವನ್ನು ಏರ್ಪಡಿಸಲಾಗಿದೆ. ಪುರುಷರಿಗೆ ಕೆಸರು ಗದ್ದೆ ಫುಟ್ಬಾಲ್, ಹಗ್ಗ ಜಗ್ಗಾಟ, ಮಹಿಳೆಯರಿಗೆ ಫೈರು ಕೀಳುವ ಸ್ಪರ್ಧೆ, ಹಗ್ಗ ಜಗ್ಗಾಟ ಹಾಗೂ ಶಾಲಾ ಮಕ್ಕಳಿಗೆ 100 ಮೀಟರ್ ಓಟದ ಸ್ಪರ್ಧೆ ನಡೆಯಲಿದೆ. ಅರಮಣಮಾಡ ಮೋಹನ್ ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದು. ಪಟ್ಟಕೇರಿ ಅಂಬಲ ಒಕ್ಕೂಟದ ಅಧ್ಯಕ್ಷ ಮತ್ರಂಡ ರಾಜ ಮುತ್ತಪ್ಪ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಪೂಳೆಮಾಡು ಈಶ್ವರ ದೇವಸ್ಥಾನ ತಕ್ಕರಾದ ಮತ್ರಂಡ ಎಸ್ ಪೂಣಚ್ಚ ಭಾಗವಹಿಸಲಿದ್ದಾರೆ. ಕ್ರೀಡಾಕೂಟದ ಸಂದರ್ಭ ಒಕ್ಕೂಟದ ಸದಸ್ಯರಾದ ಬೈರಂಡ ಎಂ. ಮುತ್ತಪ್ಪ ಹಾಗೂ ಕಾರ್ಯದರ್ಶಿ ಚೋಡುಮಾಡ ಜಿ. ಸುಬ್ಬಯ್ಯ ಅವರನ್ನು ಸನ್ಮಾನಿಸಲಾಗುವದು.
-ಚನ್ನನಾಯಕ