ಮಡಿಕೇರಿ, ಆ.6 : ಪ್ರಸಕ್ತ(2019-20) ಸಾಲಿನ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖಾ ವತಿಯಿಂದ ಕೊಡಗು ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿಯು ತಾ. 7 ರಂದು (ಇಂದು) ಬೆಳಗ್ಗೆ 10 ಗಂಟೆಗೆ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆಯಲಿದೆ.

ಪಂದ್ಯಾವಳಿಯು 14 ವರ್ಷಕ್ಕೆ ಒಳಪಟ್ಟ ಬಾಲಕ- ಬಾಲಕಿಯರಿಗೆ ಹಾಗೂ 18 ವರ್ಷ ಒಳಪಟ್ಟ ಪುರುಷರಿಗೆ ಮತ್ತು ಮಹಿಳೆಯರಿಗಾಗಿ ಸಿಂಗಲ್ಸ್ ಮತ್ತು ಡಬಲ್ಸ್ ಟೇಬಲ್ ಟೆನ್ನಿಸ್ ಪಂದ್ಯಾವಳಿ ಆಯೋಜಿಸ ಲಾಗಿದೆ. ಆಟಗಾರರು ಟಿ.ಟಿ.ಬ್ಯಾಟ್ ಅನ್ನು ತೆಗೆದುಕೊಂಡು ಬರಬೇಕು. ಭಾಗವಹಿಸುವ ಕ್ರೀಡಾಪಟುಗಳಿಗೆ ಯಾವದೇ ರೀತಿಯ ಪ್ರವೇಶ ಶುಲ್ಕ ಇರುವದಿಲ್ಲ. ಈ ಪಂದ್ಯಾವಳಿಗಳಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಹೆಚ್ಚಿನ ಮಾಹಿತಿಗೆ ಕಚೇರಿಯ ದೂರವಾಣಿ ಸಂಖ್ಯೆ: 08272-228985 ನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.