ಕೂಡಿಗೆ, ಆ.6 : ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ವತಿಯಿಂದ 5ನೇ ರಾಷ್ಟ್ರೀಯ ಕೈಮಗ್ಗ ದಿನಾಚರಣೆಯು ತಾ.7 ರಂದು (ಇಂದು) ಶಿರಂಗಾಲ ಕಾವೇರಿ ಕೈಮಗ್ಗ ಕೇಂದ್ರದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿಯ ಅಧ್ಯಕ್ಷೆ ಸರೋಜಮ್ಮ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಶಿರಂಗಾಲ ಗ್ರಾಮ ಪಂಚಾಯತ್ ಎನ್.ಎಸ್.ರಮೇಶ್ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯಿತಿ ಸದಸ್ಯ ಹೆಚ್.ಆರ್.ಶ್ರೀನಿವಾಸ್, ತಾಲೂಕು ಪಂಚಾಯಿತಿ ಸದಸ್ಯ ಎನ್.ಎಸ್.ಜಯಣ್ಣ, ಕೊಡಗು ಜಿಲ್ಲಾ ನೇಕಾರರ ಒಕ್ಕೂಟದ ಅಧ್ಯಕ್ಷ ಟಿ.ಕೆ.ಪಾಂಡುರಂಗ ಆಗಮಿಸಲಿದ್ದು, ಶಿರಂಗಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಸ್.ಎಸ್.ಚಂದ್ರಶೇಖರ್, ಶಿರಂಗಾಲ ಗ್ರಾಮ ದೇವತಾ ಸಮಿತಿಯ ಅಧ್ಯಕ್ಷ ಎಸ್.ಸಿ.ರುದ್ರಪ್ಪ ಅವರು ವಿಶೇಷ ಆಹ್ವಾನಿತರಾಗಿ ಉಪಸ್ಥಿತರಿರುವರು. ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕ ಜಿ.ಎಸ್.ಗುರುಸ್ವಾಮಿ ತಿಳಿಸಿದ್ದಾರೆ.