ಮಡಿಕೇರಿ, ಆ. 7 : ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ವತಿಯಿಂದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ತಾ. 8 ರಂದು ಮಡಿಕೇರಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆಯಬೇಕಾಗಿದ್ದ ಜಿಲ್ಲಾ ಮಟ್ಟದ ಯುವ ವಿಜ್ಞಾನಿ ಪ್ರಶಸ್ತಿ ಆಯ್ಕೆ ಪ್ರಕ್ರಿಯೆಗೆ ಸ್ಪರ್ಧೆಯನ್ನು ಮಳೆಯ ಕಾರಣದಿಂದ ತಾ. 17ಕ್ಕೆ ಮುಂದೂಡಲಾಗಿದೆ ಎಂದು ಸ್ಪರ್ಧಾ ಕಾರ್ಯಕ್ರಮದ ಜಿಲ್ಲಾ ಸಂಯೋಜಕ ಟಿ.ಜಿ. ಪ್ರೇಮಕುಮಾರ್ ಪ್ರಕಟಣೆÉಯಲ್ಲಿ ತಿಳಿಸಿದ್ದಾರೆ.

ಮಲೆನಾಡು ಮತ್ತು ಕರಾವಳಿ ಪ್ರದೇಶದ ಜಿಲ್ಲೆಯಲ್ಲಿ ಹೆಚ್ಚು ಮಳೆ ಬೀಳುತ್ತಿರುವ ಕಾರಣ ಈ ಸ್ಪರ್ಧೆಯನ್ನು ರಾಜ್ಯ ವಿಜ್ಞಾನ ಪರಿಷತ್ತಿನ ವತಿಯಿಂದ ಅನಿವಾರ್ಯ ವಾಗಿ ಮುಂದೂಡಲಾಗಿದೆ ಎಂದು ತಿಳಿಸಲಾಗಿದೆ. ತಾ. 17 ರಂದು ನಡೆಯಲಿರುವ ಸ್ಪರ್ಧೆಗೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಿರುವ ವಿದ್ಯಾರ್ಥಿಗಳು ತಮ್ಮ ಮಾರ್ಗದರ್ಶಿ ಶಿಕ್ಷಕರು/ಉಪನ್ಯಾಸಕರೊಂದಿಗೆ ಸ್ಪರ್ಧೆಗೆ ಹಾಜರಾಗಲು ತಿಳಿಸಲಾಗಿದೆ.