ಸೋಮವಾರಪೇಟೆ, ಆ. 7: ಸ್ವಾತಂತ್ರ್ಯೋತ್ಸವ ದಿನದಂದು ಪಟ್ಟಣದಲ್ಲಿ ಪ್ಲಾಸ್ಟಿಕ್ ಬಾವುಟ ಮಾರಾಟ ಕಂಡುಬಂದರೆ ಕಟ್ಟುನಿಟ್ಟಿನ ಕ್ರಮ ಜರುಗಿಸುವದಾಗಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಟರಾಜ್ ಎಚ್ಚರಿಕೆ ನೀಡಿದ್ದಾರೆ.

ಪ್ಲಾಸ್ಟಿಕ್ ಬಾವುಟ ಮಾರಾಟ ಮಾಡುವದನ್ನು ನಿಷೇಧಿಸಲಾಗಿದ್ದು, ಉಲ್ಲಂಘನೆಯಾದಲ್ಲಿ ದಂಡ ವಿಧಿಸುವ ಮೂಲಕ ಶಿಸ್ತು ಕ್ರಮ ಕೈಗೊಳ್ಳಲಾಗುವದು ಎಂದು ನಟರಾಜ್ ತಿಳಿಸಿದ್ದಾರೆ.