ಕೂಡಿಗೆ, ಆ. 7: ಕೊಡಗಿನಲ್ಲಿ ಹೆಚ್ಚಿನ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪಿ. ಅವರು ಹಾರಂಗಿ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಹಾರಂಗಿ ಅಣೆಕಟ್ಟೆಯ ಅಧಿಕಾರಿಗಳಿಂದ ನೀರಿನ ಸಂಗ್ರಹ, ಒಳಹರಿವು, ಕಟ್ಟೆಯ ಭದ್ರತೆಯ ಬಗ್ಗೆ ಮಾಹಿತಿ ಪಡೆದರು.

ಈ ಸಂದರ್ಭ ಸಹಾಯಕ ಕಾರ್ಯಪಾಲಕ ಅಭಿಯಂತರ ರಾಜೇಗೌಡ, ಸಹಾಯಕ ಅಭಿಯಂತರ ನಾಗರಾಜು, ಪೊಲೀಸ್ ಸಿಬ್ಬಂದಿಗಳು ಇದ್ದರು.