ಮಡಿಕೇರಿ, ಆ. 7: ಗೋಶಾಲೆ ಸ್ಥಾಪಿಸುವ ಸಂಬಂಧ ಅನುಮತಿಗಾಗಿ ಕೊಡಗು ಜಿಲ್ಲಾಧಿಕಾರಿಗಳ ಸಹಿಯನ್ನು ನಕಲಿ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ಸುಂಟಿಕೊಪ್ಪ ಗ್ರಾ.ಪಂ. ಸದಸ್ಯ ಬೆಳೆಗಾರ ಬಿ.ಜಿ. ಹೇಮಂತ್‍ಕುಮಾರ್, ಕುಸುಬೂರಿನ ಉದ್ಯಮಿ ಕೆ.ಡಿ. ಕುಮಾರ್, ಸುಂಟಿಕೊಪ್ಪ ಬಳಿಯ ಕಲ್ಲೂರಿನ ಡಿ.ಕೆ. ಕೃಷ್ಣಪ್ಪ ಅವರುಗಳನ್ನು ಬಂಧಿಸಿ ನ್ಯಾಯಾಂಗ ವಶಕ್ಕೊಪ್ಪಿಸಲಾಗಿದೆ. ಪೊಲೀಸ್ ಅಧೀಕ್ಷಕಿ ಡಾ. ಸುಮನ್ ಡಿ.ಪಿ. ಅವರ ಮಾರ್ಗದರ್ಶನದಲ್ಲಿ ಮಡಿಕೇರಿ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ ನೇತೃತ್ವದಲ್ಲಿ ನಗರ ಠಾಣಾಧಿಕಾರಿ ಷಣ್ಮುಗಂ, ಸಿಬ್ಬಂದಿಗಳಾದ ಕೆ.ಕೆ. ದಿನೇಶ್, ಪ್ರವೀಣ್, ನಾಗರಾಜ್, ಗಿರೀಶ್ ಅವರುಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.