ಸಿದ್ದಾಪುರ, ಆ. 8: ಪಾಲಿಬೆಟ್ಟ ಖಾಸಗಿ ಕಾಫಿ ತೋಟದಲ್ಲಿ ಘಟನೆ ತೋಟ ಕೆಲಸಕ್ಕೆ ತೆರಳಿದ ಕಾರ್ಮಿಕ ಮರ್ದಯ್ (50) ಕಾಡಾನೆ ದಾಳಿಗೆ ಸಿಲುಕಿ ಗಂಭೀರ ಗಾಯಗೊಂಡು ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.

ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಂದರ್ಭ ಹಠಾತ್ತನೆ ಬಂದ ಕಾಡಾನೆಯೊಂದು ದಾಳಿ ಮಾಡಿ ಗಾಯಗೊಳಿಸಿದೆ. ಸಿದ್ದಾಪುರ ಆಸ್ಪತ್ರೆಗೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಡಾನೆ ಹಾವಳಿ ತಡೆಗೆ ಕಾರ್ಮಿಕರು ಒತ್ತಾಯಿಸಿದ್ದಾರೆ. - ವಾಸು