ಮಡಿಕೇರಿ, ಆ.9: ಕೇಂದ್ರ ರಸಗೊಬ್ಬರ ಖಾತೆ ಸಚಿವರಾದ ಡಿ.ವಿ.ಸದಾನಂದ ಗೌಡ, ಶಾಸಕರಾದ ಕೆ.ಎಸ್.ಈಶ್ವರಪ್ಪ, ಎಂ.ಪಿ.ಅಪ್ಪಚ್ಚುರಂಜನ್, ಸಿ.ಟಿ.ರವಿ, ಪ್ರೀತಂಗೌಡ, ಸಂಸದ ಪ್ರತಾಪ್ ಸಿಂಹ ಅವರು ಶುಕ್ರವಾರ ಕುಶಾಲನಗರ ಪಟ್ಟಣದ ಕುವೆಂಪು ಮತ್ತು ಸಾಯಿ ಬಡಾವಣೆ ಹಾಗೂ ನೆಲ್ಯಹುದಿಕೇರಿ ಮತ್ತಿತರ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಶಾಸಕ ಕೆ.ಜಿ.ಬೋಪಯ್ಯ ಅವರು ಶುಕ್ರವಾರ ಸಿದ್ದಾಪುರ, ಕಾನೂರು, ಬಿರುನಾಣಿ, ತೋರಾ ಮತ್ತಿತರ ಪ್ರವಾಹ ಪೀಡಿತ ಪ್ರದೇಶಗಳಿಗೆ ಮತ್ತು ಪರಿಹಾರ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.