ಮಡಿಕೇರಿ, ಆ. 9: ವೀರಾಜಪೇಟೆ ತಾಲೂಕು, ಟಿ. ಶೆಟ್ಟಿಗೇರಿ ಪಂಚಾಯಿತಿಗೆ ಒಳಪಟ್ಟ ಕುಟ್ಟಂದಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಟಿ. ಶೆಟ್ಟಿಗೇರಿ ಗ್ರಾ.ಪಂ. ವತಿಯಿಂದ ಉಚಿತ ಬ್ಯಾಗ್ ಮತ್ತು ನೋಟು ಪುಸ್ತಕಗಳನ್ನು ವಿತರಿಸಲಾಯಿತು.

ಪಂಚಾಯಿತಿ ಅಧ್ಯಕ್ಷ ಕಡೇಮಾಡ ಅಶೋಕ್ ಚಿಟ್ಟಿಯಪ್ಪ ಹಾಗೂ ಅಭಿವೃದ್ಧಿ ಅಧಿಕಾರಿ ತಿಮ್ಮಯ್ಯ ಅವರು ವಿದ್ಯಾರ್ಥಿಗಳಿಗೆ ಬ್ಯಾಗ್ ಮತ್ತು ಪುಸ್ತಕವನ್ನು ವಿತರಿಸಿದರು. ತಾ.ಪಂ. ಮಾಜಿ ಅಧ್ಯಕ್ಷ ಉಮೇಶ್ ಕೇಚಮ್ಮಯ್ಯ, ಅಂಗನವಾಡಿ ಕಾರ್ಯಕರ್ತೆ ಶಾಂತಿ, ಎಸ್‍ಡಿಎಂಸಿ ಸದಸ್ಯರು, ಮುಖ್ಯ ಶಿಕ್ಷಕರು ಹಾಗೂ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಬಿ.ಸಿ. ಧರಣಿ ಅವರು ಸ್ವಾಗತಿಸಿ, ವಂದಿಸಿದರು.