ಗೋಣಿಕೊಪ್ಪಲು, ಆ. 9: ಮಳೆಯಿಂದ ಹಾನಿಗೊಳಗಾದ ದ.ಕೊಡಗಿನ ಬಾಳೆಲೆ, ನಿಟ್ಟೂರು ಸೇತುವೆ ಸೇರಿದಂತೆ ವಿವಿಧ ಭಾಗಗಳಿಗೆ ವಿಧಾನಪರಿಷತ್ ಸದಸ್ಯ ಸುನೀಲ್ ಸುಬ್ರಮಣಿ ಭೇಟಿ ನೀಡಿ ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಬಾಳೆಲೆ,ಗೋಣಿಕೊಪ್ಪಲು ಪರಿಹಾರ ಕೇಂದ್ರಕ್ಕೆ ಭೇಟಿ ನೀಡಿದ ಅವರು ಸಂತ್ರಸ್ತರೊಂದಿಗೆ ಮಾತನಾಡಿ ಮಾಹಿತಿ ಪಡೆದರು.
‘ಶಕ್ತಿ'ಯೊಂದಿಗೆ ಮಾತನಾಡಿದ ಇವರು ಈಗಾಗಲೇ ನೆರೆಹಾವಳಿಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಶಾಸಕರು, ಸಂಸದರು ವಿವಿಧ ಪ್ರದೇಶಗಳಲ್ಲಿ ಪ್ರವಾಸ ಕೈಗೊಂಡು ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಯಾವದೇ ಸಮಸ್ಯೆಗಳನ್ನು ಎದುರಿಸಲು ಸಿದ್ಧರಿದ್ದೇವೆ. ಹಣಕಾಸಿಗೆ ಯಾವದೇ ತೊಂದರೆ ಇಲ್ಲ. ಜನತೆ ಗಾಬರಿಗೊಳ್ಳುವ ಅವಶ್ಯಕತೆ ಇಲ್ಲ ಎಂದರು.
ಭೇಟಿಯ ಸಂದರ್ಭ ಬಿಜೆಪಿಯ ಪಿ.ಡಿ.ಪೊನ್ನಪ್ಪ, ಗೋಣಿಕೊಪ್ಪ ವೃತ್ತ ನಿರೀಕ್ಷಕ ದಿವಾಕರ್ ಅಧಿಕಾರಿಗಳು ಹಾಜರಿದ್ದರು.
- ಹೆಚ್.ಕೆ.ಜಗದೀಶ್.