ಕುಶಾಲನಗರ, ಆ. 9: ಉಕ್ಕಿ ಹರಿಯುತ್ತಿರುವ ಕಾವೇರಿಯನ್ನು ಶಾಂತಗೊಳಿಸುವ ನಿಟ್ಟಿನಲ್ಲಿ ಕಾವೇರಿ ನದಿಗೆ ವಿಶೇಷ ಪೂಜಾ ಕಾರ್ಯಕ್ರಮದೊಂದಿಗೆ ಬಾಗಿನ ಅರ್ಪಿಸಲಾಯಿತು.
ಕುಶಾಲನಗರ ಶ್ರೀ ಅಯ್ಯಪ್ಪಸ್ವಾಮಿ ದೇವಾಲಯ ಬಳಿ ನದಿಗೆ ಕಾವೇರಿ ಮಹಾ ಆರತಿ ಬಳಗದಿಂದ ವಿಶೇಷ ಆರತಿ, ಪೂಜಾ ವಿಧಿಗಳನ್ನು ನೆರವೇರಿಸಲಾಯಿತು. ಅರ್ಚಕ ಕೃಷ್ಣಮೂರ್ತಿ ಭಟ್, ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಂಚಾಲಕ ಎಂ.ಎನ್. ಚಂದ್ರಮೋಹನ್, ಪ್ರಮುಖರಾದ ಡಿ.ಆರ್. ಸೋಮಶೇಖರ್, ಕೆ.ಆರ್. ಶಿವಾನಂದ, ಕುಶಲ ಅರ್ಚಕರ ಸಂಘದ ಅಧ್ಯಕ್ಷ ಪರಮೇಶ್ವರ ಭಟ್, ಕರವೇ ಜಿಲ್ಲಾಧ್ಯಕ್ಷ ವೆಂಕಟೇಶ್ ಪೂಜಾರಿ, ಹರೀಶ್, ಮಹಾ ಆರತಿ ಬಳಗದ ವನಿತಾ ಚಂದ್ರಮೋಹನ್ ಮತ್ತಿತರರು ಇದ್ದರು.