ಚೆಟ್ಟಳ್ಳಿ, ಆ. 9: ಕೊಡಗಿನ ಹಲವೆಡೆ ಧಾರಾಕಾರವಾಗಿ ಮಳೆ ಸುರಿಯುತಿದ್ದು, ಅಮ್ಮತ್ತಿಯಲ್ಲಿ ಭಾರೀ ಮಳೆಯಾಗುತ್ತಿದೆ. ನಿನ್ನೆ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಅಮ್ಮತ್ತಿ-ಕಾರ್ಮಾಡು ಗ್ರಾಮದ ಜನತಾ ಕಾಲೋನಿಯ 3 ಮನೆಗಳಿಗೆ ನೀರು ನುಗ್ಗಿದೆ. ಮನೆಯವರು ರಾತ್ರಿಯಲ್ಲಿ ಮನೆಗೆ ನುಗ್ಗಿದ ನೀರನ್ನು ಹೊರ ಚೆಲ್ಲುವಲ್ಲಿ ನಿರತರಾದರು. ಅಮ್ಮತ್ತಿ-ಕಾರ್ಮಾಡು ಗ್ರಾಮದ ಮುಕ್ಕಾಟಿಕೊಪ್ಪದ ತೋಡು ತುಂಬಿ ರಸ್ತೆ, ತೋಟಗಳು ಜಲಾವೃತವಾಗಿದ್ದು, ಗ್ರಾಮಸ್ಥರು ಮನೆಗಳಿಗೆ ನೀರು ನುಗ್ಗುವ ಆತಂಕದಲ್ಲಿದ್ದಾರೆ. - ಕೆ.ಎಂ. ಇಸ್ಮಾಯಿಲ್ ಕಂಡಕರೆ.