ಮಡಿಕೇರಿ, ಆ. 9: ಕೊಡಗು ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರೆದಿರುವದರಿಂದ ಮತ್ತು ಜಿಲ್ಲೆಗೆ ರೆಡ್ ಅಲರ್ಟ್ ಇರುವದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ತಾ. 10 (ಇಂದು) ಜಿಲ್ಲೆಯ ಎಲ್ಲಾ ಅಂಗನವಾಡಿ ಮತ್ತು ಶಾಲಾ - ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.