ಮಡಿಕೇರಿ, ಆ. 9: ಕೊಡಗಿನಲ್ಲಿ ಉಂಟಾಗಿರುವ ನೆರೆ ಪರಿಸ್ಥಿತಿಯನ್ನು ಸಮಗ್ರವಾಗಿ ನಿರ್ವಹಿಸಲು ಹಾಗೂ ಪರಿಹಾರ ಕಾರ್ಯಗಳಿಗಾಗಿ ರಾಜ್ಯ ಸರ್ಕಾರವೂ ರಾಜ್ಯ ವಿಪತ್ತು ನಿರ್ವಹಣಾ ನಿಧಿಯಡಿಯಲ್ಲಿ ಕೊಡಗು ಜಿಲ್ಲೆಗೆ 5 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಈ ಬಗ್ಗೆ ಕಂದಾಯ ಇಲಾಖೆಯ ವಿಪತ್ತು ನಿರ್ವಹಣೆ ವಿಭಾಗದ ಸರ್ಕಾರದ ಉಪಕಾರ್ಯದರ್ಶಿ ಲಲಿತಾ ಹೆಚ್. ಹಂದಿಗೋಳ ಆದೇಶ ಹೊರಡಿಸಿದ್ದಾರೆ.