ಮಡಿಕೇರಿ, ಆ. 10: ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ ನೂತನ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಕೊಡಗಿನ ಜಿ.ವಿ. ಚಂದ್ರಕುಮಾರ್ ಅಧಿಕಾರ ವಹಿಸಿಕೊಂಡಿದ್ದಾರೆ.

ಬೆಂಗಳೂರು ವೃತ್ತದ ಪ್ರಧಾನ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದ ಇವರು 1991 ರಲ್ಲಿ ಕೆಎಸ್‍ಎಫ್‍ಸಿ ವ್ಯವಸ್ಥಾಪಕರಾಗಿ ಸೇವೆಗೆ ಸೇರಿ 28 ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿರುತ್ತಾರೆ. ಇವರು, ಮಡಿಕೇರಿಯ ಗೌಳಿಬೀದಿ ನಿವಾಸಿ ಜಿ. ಪೇಚಮ್ಮ ಹಾಗೂ ದಿ. ಜಿ.ಎ. ವೆಂಕಟರಮಣ ಅವರ ಪುತ್ರ.

ಮುಂದಿನ ದಿನಗಳಲ್ಲಿ ರಾಜ್ಯದ ಉದ್ಯೋಗಾಕಾಂಕ್ಷಿಗಳಿಗೆ, ಕೈಗಾರಿಕೋದ್ಯಮಿಗಳಿಗೆ ಸಂಸ್ಥೆಯ ಯೋಜನೆಗಳ ಮೂಲಕ ಹೆಚ್ಚಿನ ಉತ್ತೇಜನ ನೀಡುವದರೊಂದಿಗೆ ರಾಜ್ಯದಲ್ಲಿ ಕೈಗಾರಿಕೆಗಳ ಅಭಿವೃದ್ಧಿಗೆ ಸಹಕರಿಸಲಾಗುವದು ಎಂದು ಚಂದ್ರಕುಮಾರ್ ತಿಳಿಸಿದ್ದಾರೆ.