ಮಡಿಕೇರಿ, ಆ. 10: ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ದಿಂದ ಹವಾಮಾನ ಮುನ್ಸೂಚನಾ ಪ್ರಕಟಣೆಯನ್ನು ಮುಂದುವರೆಸ ಲಾಗಿದೆ. ಜಿಲ್ಲೆಯಲ್ಲಿ ತಾ. 12ರಂದು ಬೆಳಿಗ್ಗೆ 8.30ರವರೆಗೆ ರೆಡ್ ಅಲರ್ಟ್ (204.04 ಮೀ.ಮೀ. ಗಿಂತ ಅಧಿಕ ಮಳೆ ಬೀಳುವ ಸಾಧ್ಯತೆ) ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಈಗಾಗಲೇ ಜಿಲ್ಲೆಯ 67 ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಭೂ ಕುಸಿತದಿಂದ ರಸ್ತೆ ಸಂಪರ್ಕಗಳು ಕಡಿತಗೊಂಡಿ ರುತ್ತದೆ. ಜಿಲ್ಲೆಯಲ್ಲಿ ಈಗಾಗಲೇ 2 ಕಡೆಗಳಲ್ಲಿ ಭಾರಿ ಭೂಕುಸಿತವುಂಟಾ ಗಿದ್ದು, ಒಟ್ಟು 7 ಜನರು ಮೃತ ಪಟ್ಟಿದ್ದು, 8 ಜನರು ಕಾಣೆಯಾಗಿರುತ್ತಾರೆ. ಜಿಲ್ಲೆಯಲ್ಲಿ ಒಟ್ಟು 40 ಪರಿಹಾರ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, 4631 ಜನರಿಗೆ ವಸತಿ ಹಾಗೂ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ. ಹವಾಮಾನ ಇಲಾಖೆಯ ಮನ್ಸೂಚನೆಯಂತೆ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿರುವದರಿಂದ ಬೆಟ್ಟಗುಡ್ಡ, ನದಿ ತೀರದ ಪ್ರದೇಶದಲ್ಲಿ ವಾಸ ವಿರುವ ಜನರು ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ ಹಾಗೂ ಸಾರ್ವಜನಿ ಕರು ಮತ್ತು ಪ್ರವಾಸಿಗರು ಎಚ್ಚರಿಕೆಯಿಂದಿರಲು ಜಿಲ್ಲಾಡಳಿತ ಮನವಿ ಮಾಡುತ್ತದೆ. ಹಾಗೆಯೇ ತುರ್ತು ಸಂದರ್ಭಗಳಲ್ಲಿ ಜಿಲ್ಲಾಡಳಿ ತವು ಸಂತ್ರಸ್ತರ ರಕ್ಷಣೆಗೆ ಬಂದಾಗ ಸಾರ್ವಜನಿಕರು ರಕ್ಷಣಾ ತಂಡ ದೊಂದಿಗೆ ಸಹಕರಿಸಲು ಕೋರಿದೆ.
ಪ್ರಕೃತಿ ವಿಕೋಪ ಸಂಬಂಧಿತ ಯಾವದೇ ಸಮಸ್ಯೆಗಳಿಗೆ ಈ ಕೆಳಕಂಡ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.