*ಗೋಣಿಕೊಪ್ಪಲು, ಆ. 10: ಗೋಣಿಕೊಪ್ಪಲಿನ ಮಳೆ ಹಾನಿ ಸಂತ್ರಸ್ತರ ಕೇಂದ್ರಕ್ಕೆ ಸಂಸದ ಪ್ರತಾಪ್ ಸಿಂಹ, ಶಾಸಕರಾದ ಕೆ.ಎಸ್.ಈಶ್ವರಪ್ಪ, ವಿ ಸೋಮಣ್ಣ, ಕೆ.ಜಿ.ಬೋಪಯ್ಯ, ಸಿ.ಟಿ.ರವಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಹರೀಶ್, ಸಾಮಾಜಿಕ ನ್ಯಾಯಸಮಿತಿ ಅಧ್ಯಕ್ಷ ಸಿ.ಕೆ.ಬೋಪಣ್ಣ, ಜಿಲ್ಲಾ ಬಿಜೆಪಿ ವ್ಯಾಪಾರ ಪ್ರಕೋಷ್ಟ ಅಧ್ಯಕ್ಷ ಕೆ.ಬಿ.ಗಿರೀಶ್ ಗಣಪತಿ. ಜಿಲ್ಲಾ ಬಿಜೆಪಿ ಅಧ್ಯಕ್ಷ ಭಾರತೀಶ್ ಆರ್‍ಎಂಸಿ ಸದಸ್ಯ ಕಿಲನ್ ಗಣಪತಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಪ್ಪಣ್ಣ ಭೇಟಿ ನೀಡಿ ಸಾಂತ್ವನ ಹೇಳಿದರು.
ಸಂತ್ರಸ್ತರೊಂದಿಗೆ ಮಾತನಾಡಿದ ಶಾಸಕ ಕೆ.ಜಿ.ಬೋಪಯ್ಯ ಮಳೆ ನಿಂತ ಬಳಿಕ ವಾಸಕ್ಕೆ ಸೂಕ್ತವಾದ ಜಾಗ ಗುರುತಿಸಿ ಅಲ್ಲಿಗೆ ಸ್ಥಳಾಂತರಿಸಲು ಪ್ರಯತ್ನಿಸಲಾಗುವದು ಎಂದರು.
ಶಾಸಕ ಸಿ.ಟಿ. ರವಿ ಪತ್ರಿಕೆಯೊಂದಿಗೆ ಮಾತನಾಡಿ ಮಳೆ ಹಾನಿ ಸಂತ್ರಸ್ತರಿಗೆ ಬೇಕಾದ ಅವಶ್ಯಕತೆಗಳನ್ನು ಒದಗಿಸಲು ಬೆಂಗಳೂರಿನ ವಿವಿಧ ಸಂಘಸಂಸ್ಥೆಗಳು ತಮ್ಮನ್ನು ಸಂಪರ್ಕಿಸುತ್ತಿವೆ. ಅಗತ್ಯ ವಸ್ತುಗಳನ್ನು ತರಿಸಿಕೊಂಡು ಅವರಿಗೆ ತಲಪಿಸಲಾಗುವದು ಎಂದರು. ಉಪವಿಭಾಗಾಧಿಕಾರಿ ಜವರೇಗೌಡ ಹಾಜರಿದ್ದರು.
-ಚಿತ್ರ ವರದಿ: ಎನ್.ಎನ್.ದಿನೇಶ್