ನಾಪೆÇೀಕ್ಲು, ಆ. 10: ಕೊಣಂಜಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೈಕಾಡು ಗ್ರಾಮದ ಮುಕ್ಕಾಟಿರ, ಮಡಿವಾಳರ, ಬೊಳ್ಳಂಡ ಮನೆಗೆ ಸಾಗುವ ರಸ್ತೆಯನ್ನು ಸುಮಾರು ರೂ. 2 ಲಕ್ಷ ವೆಚ್ಚದಲ್ಲಿ ಕಾಂಕ್ರೀಟೀಕರಣಗೊಳಿಸಲು ಉದ್ದೇಶಿಸಿದ್ದು, ಈ ಕಾಮಗಾರಿಗೆ ಜಿಲ್ಲಾ ಪಂಚಾಯಿತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ನೆಲ್ಲಚಂಡ ಕಿರಣ್ ಕಾರ್ಯಪ್ಪ ಭೂಮಿಪೂಜೆ ನೆರವೇರಿಸಿದರು.

ಈ ಸಂದರ್ಭ ತಾಲೂಕು ಪಂಚಾಯಿತಿ ಸದಸ್ಯೆ ನೆರೆಯಂಡಮ್ಮಂಡ ಉಮಾ ಪ್ರಭು, ಪಾರಾಣೆ ಬಿಜೆಪಿ ಸ್ಥಾನೀಯ ಸಮಿತಿ ಅಧ್ಯಕ್ಷ ರಾಜ ಪೂವಯ್ಯ, ಗುತ್ತಿಗೆದಾರ ನಾಯಕಂಡ ವಿನು, ಮತ್ತಿತರರು ಇದ್ದರು.