ಜಿಲ್ಲೆಗೆ ರಾಜ್‍ಕುಮಾರ್ ಖತ್ರಿ ಮಡಿಕೇರಿ, ಆ. 11 : ರಾಜ್ಯದಲ್ಲಿ ಅತಿವೃಷ್ಟಿಯಿಂದ ಉದ್ಭವಿಸಿರುವ ಸಮಸ್ಯೆಗಳ ಪರಿಹಾರ ಕಾರ್ಯಗಳ ಕುರಿತು ಮೇಲುಸ್ತುವಾರಿ ವಹಿಸಲು ಜಿಲ್ಲಾ ಮೇಲ್ವಿಚಾರಣಾಧಿಕಾರಿಗಳನ್ನು ನೇಮಿಸಿ ಸರಕಾರ ಆದೇಶ ಹೊರಡಿಸಿದೆ. ರಾಜ್ಯದ 11 ಜಿಲ್ಲೆಗೆ ಈ ಅಧಿಕಾರಿಗಳನ್ನು ನೇಮಿಸಲಾಗಿದ್ದು, ಕೊಡಗು ಜಿಲ್ಲೆಗೆ ಐಎಎಸ್ ಅಧಿಕಾರಿ ಡಾ. ರಾಜ್‍ಕುಮಾರ್ ಖತ್ರಿ ಅವರನ್ನು ನಿಯೋಜಿಸಲಾಗಿದೆ.ಈ ಅಧಿಕಾರಿಗಳು ಜಿಲ್ಲಾ ಆಡಳಿತ ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಪರಿಹಾರ ಕಾರ್ಯಗಳು ತ್ವರಿತವಾಗಿ ಪರಿಣಾಮಕಾರಿಯಾಗಿ ನಡೆಸಲು ಕ್ರಮವಹಿಸುವಂತೆ ಸೂಚಿಸಿ ಕಂದಾಯ ಇಲಾಖೆಯ ವಿಪತ್ತು ನಿರ್ವಹಣೆ ವಿಭಾಗದ ಸರಕಾರದ ಕಾರ್ಯದರ್ಶಿ ಟಿ.ಕೆ. ಅನಿಲ್‍ಕುಮಾರ್ ಆದೇಶ ಹೊರಡಿಸಿದ್ದಾರೆ.