ಗೋಣಿಕೊಪ್ಪಲು, ಆ.11: ಭಾರೀ ಮಳೆಗೆ ಮನೆಗಳನ್ನು ಕಳೆದುಕೊಂಡು ಪರಿಹಾರ ಕೇಂದ್ರದಲ್ಲಿ ಆಶ್ರಯ ಪಡೆದ ಸಂತ್ರಸ್ತರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಭೇಟಿ ಮಾಡಿದರು.

ಗೋಣಿಕೊಪ್ಪಲುವಿನ ಪರಿಹಾರ ಕೇಂದ್ರದಲ್ಲಿ ಆಶ್ರಯ ಪಡೆದ 250 ಸಂತ್ರಸ್ತರ ಅಹವಾಲು ಆಲಿಸಿದ ಈಶ್ವರ ಖಂಡ್ರೆ ಅವರು ಹೊಳೆಯ ದಂಡೆಯ ಬದಲು ಬೇರೆ ಜಾಗದಲ್ಲಿ ಶಾಶ್ವತ ಮನೆ ನಿರ್ಮಿಸಲು ಸರ್ಕಾರಕ್ಕೆ ಮನವಿ ಮಾಡುತ್ತೇನೆ. ನಿರಾಶ್ರಿತರು ಸುರಕ್ಷಿತ ಸ್ಥಳದಲ್ಲಿ ಜಾಗ ಮಂಜೂರು ಮಾಡಿದ ಸಂದರ್ಭದಲ್ಲಿ ವಿರೋಧ ಮಾಡದೇ ತೆರಳುವಂತೆ ಸಲಹೆಯಿತ್ತರು. ನಂತರ 'ಶಕ್ತಿ'ಯೊಂದಿಗೆ ಮಾತನಾಡಿದ ಈಶ್ವರ ಖಂಡ್ರೆ ಇಲ್ಲಿನ ಪರಿಸ್ಥಿತಿ ಬಗ್ಗೆ ಮುಖ್ಯಮಂತ್ರಿ ಹಾಗೂ ಅಧಿಕಾರಿಗಳ ಗಮನ ಸೆಳೆಯುತ್ತೇನೆ ಎಂದರು. ಭೇಟಿಯ ಸಂದರ್ಭದಲ್ಲಿ ಕೊಡಗು ಜಿಲ್ಲಾದ್ಯಕ್ಷ ಕೆ.ಕೆ.ಮಂಜುನಾಥ್, ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಮಾಜಿ ಎಂ.ಎಲ್.ಸಿ. ಅರುಣ್ ಮಾಚಯ್ಯ, ಕಾಂಗ್ರೆಸ್ ಮುಖಂಡ ಚಂದ್ರಮೌಳಿ, ನಗರ ಕಾಂಗ್ರೆಸ್ ಅಧ್ಯಕ್ಷ ಕುಲ್ಲಚಂಡ ಗಣಪತಿ, ಗ್ರಾ. ಪಂ. ಸದಸ್ಯರಾದ ಬಿ.ಎನ್. ಪ್ರಕಾಶ್, ಮುರುಗ, ರಾಜಶೇಖರ್, ಮಂಜುಳಾ, ಯಾಶ್ಮಿನ್, ಮುಖಂಡ ಶ್ರೀನಿವಾಸ್ ನಾಯ್ಡು, ಮುಂತಾದವರು ಹಾಜರಿದ್ದರು. - ಹೆಚ್.ಕೆ.ಜಗದೀಶ್