ಮಡಿಕೇರಿ, ಆ. 12: ಅಖಂಡ ಭಾರತದ ಸಂಕಲ್ಪದೊಂದಿಗೆ ಹಿಂದೂ ಜಾಗರಣಾ ವೇದಿಕೆ ವತಿಯಿಂದ ನಗರದಲ್ಲಿ ಪಂಜಿನ ಮೆರವಣಿಗೆ ನಡೆಸಲಾಯಿತು. ಶುಕ್ರವಾರ ಸುರಿಯುವ ಮಳೆಯಲ್ಲಿ ಮೆರವಣಿಗೆಯಲ್ಲಿ ಸಾಗಿದ ಕಾರ್ಯಕರ್ತರು ಘೋಷಣೆಗಳನ್ನು ಕೂಗಿದರು. ನಂತರ ನಡೆದ ಕಾರ್ಯಕ್ರಮದಲ್ಲಿ ಆರ್.ಎಸ್.ಎಸ್. ಸಾಮರಸ್ಯ ವೇದಿಕೆ ವಿಭಾಗ ಸಂಯೋಜಕ್ ಸುರೇಶ್ ಪರ್ಕಳ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು.