ನಾಪೆÇೀಕ್ಲು, ಆ. 13: ಚೆಯ್ಯಂಡಾಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೆಯ್ಯಂಡಾಣೆ, ಕೋಕೇರಿ, ಚೇಲಾವರ ಸೇರಿದಂತೆ ಈ ವ್ಯಾಪ್ತಿಯಲ್ಲಿ ಕಳೆದ ಒಂದು ವಾರದಿಂದ ವಿದ್ಯುತ್ ಸಂಪರ್ಕವಿಲ್ಲದೆ ಜನರು ಕತ್ತಲೆಯಲ್ಲಿ ಕಾಲ ಕಳೆಯುವ ಪರಿಸ್ಥಿತಿ ಎದುರಾಗಿದೆ.

ವಿದ್ಯುತ್ ಇಲ್ಲದೆ ಬಿಎಸ್‍ಎನ್‍ಎಲ್ ಸೇರಿದಂತೆ ಯಾವದೇ ಮೊಬೈಲ್ ಸೇವೆಗಳು ಅಲಭ್ಯವಾಗಿದ್ದು, ಮಳೆಯ ಪರಿಸ್ಥಿತಿಯಲ್ಲಿ ಹೊರ ಜಗತ್ತಿನ ಆಗು ಹೋಗುಗಳನ್ನು ತಿಳಿಯಲು ಸಾಧ್ಯವಿಲ್ಲದಂತಹ ಪರಿಸ್ಥಿತಿ ನಿರ್ಮಾಣಗೊಂಡಿದೆ. ವಿದ್ಯುತ್ ಇಲಾಖೆಯು ಹೆಚ್ಚುವರಿ ಸಿಬ್ಬಂದಿಗಳನ್ನು ನೇಮಿಸಿ ಕೆಲಸ ಕಾರ್ಯ ನಡೆಸುತ್ತಿದ್ದರೂ ನಮ್ಮ ಗ್ರಾಮಗಳ ಬಗ್ಗೆ ಯಾರೂ ಗಮನಹರಿಸುತ್ತಿಲ್ಲ. ಈ ಬಗ್ಗೆ ಸಂಬಂಧಪಟ್ಟವರು ಕ್ರಮಕೈಗೊಳ್ಳಬೇಕೆಂದು ಈ ವ್ಯಾಪ್ತಿಯ ಗ್ರಾಮಸ್ಥರು ಆಗ್ರಹಿಸಿದ್ದಾರೆ.