ಮಡಿಕೇರಿ, ಆ. 13: ಜಿಲ್ಲಾಡಳಿತವು ಪ್ರಸ್ತುತ ಜಿಲ್ಲೆಯಲ್ಲಿ ಸುರಿಯುತ್ತಿರುವ ವಿಪರೀತ ಮಳೆಯ ಪರಿಣಾಮ ತೀವ್ರ ಪ್ರವಾಹಸ್ಥಿತಿಯ ಸಲುವಾಗಿ ಮುನ್ನೆಚ್ಚರಿಕೆಯ ಕ್ರಮವಾಗಿ ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ನೀಡಿದ್ದರೂ, ತಾ. 15 ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ಕಾಲೇಜು ಹಂತದಲ್ಲಿ ಕಡ್ಡಾಯವಾಗಿ ಪ್ರಾಂಶುಪಾಲರು, ಉಪನ್ಯಾಸಕರು, ವಿದ್ಯಾರ್ತಿಗಳು ಸ್ವಾತಂತ್ರ್ಯೋತ್ಸವದಲ್ಲಿ ಪಾಲ್ಗೊಳ್ಳಬೇಕೆಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.
ಆದರೆ ಪ್ರವಾಹ ಪರಿಸ್ಥಿತಿಯಿಂದ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಸಂಚಾರ ಸ್ಥಗಿತಗೊಂಡಿದ್ದು, ಹೀಗಿರುವಾಗ ವಿದ್ಯಾರ್ತಿಗಳು ಕಡ್ಡಾಯವಾಗಿ ಭಾಗವಹಿಸಲೇಬೇಕೆಂದು ಆದೇಶ ಹೊರಡಿಸಿರುವದು ಎಷ್ಟು ಸರಿ ಎಂದು ಪೋಷಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.