ಮಡಿಕೇರಿ, ಆ. 13: ‘ಶಕ್ತಿ’ಯಲ್ಲಿ ಪ್ರಕಟಗೊಂಡ ‘ಬ್ರಹ್ಮಗಿರಿ ಬೆಟ್ಟ ತಪ್ಪಲನ್ನು ಮೈದಾನ ಮಾಡಲು ಅನುಮತಿ ಕೊಟ್ಟವರಾರು?’ ಎಂಬ ಶೀರ್ಷಿಕೆಯ ತನಿಖಾ ವರದಿ ಸಂಬಂಧಿಸಿದಂತೆ ಈಗಾಗಲೇ ತನಿಖೆಗೆ ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.ತಲಕಾವೇರಿ ವ್ಯಾಪ್ತಿಯಲ್ಲಿ ನಿಯಮಬಾಹಿರವಾಗಿ ರೆಸಾರ್ಟ್ ಕಾಮಗಾರಿ ಪ್ರಾರಂಭಿಸಿ ಭೂಕುಸಿತದ ಭೀತಿಗೆ ಸರ್ಕಾರಿ ಸಿಬ್ಬಂದಿಯೇ ಕಾರಣವಾಗಿರುವ ಬಗ್ಗೆ ಗ್ರಾಮಸ್ಥರಿಂದ ಆರೋಪ ಕೇಳಿಬಂದಿದ್ದು ‘ಶಕ್ತಿ’ ಕೂಡ ಪ್ರಕರಣದ ಬಗ್ಗೆ ಬೆಳಕು ಚೆಲ್ಲಿತ್ತು. ಈ ಪ್ರಕರಣವನ್ನು ತನಿಖೆ ಮಾಡಿ ವರದಿ ನೀಡುವಂತೆ ಉಪವಿಭಾಗಾಧಿಕಾರಿಗಳಿಗೆ ಸೂಚಿಸಿರುವದಾಗಿಯೂ ಜಿಲ್ಲಾಧಿಕಾರಿ ತಿಳಿಸಿದ್ದಾರೆ.