ಕುಶಾಲನಗರ, ಆ 12: ಕುಶಾಲನಗರ ಮೂಲಕ ಹರಿಯುವ ಕಾವೇರಿ ನದಿಯಲ್ಲಿ ನೀರಿನ ಹರಿವು ಬಹುತೇಕ ಕಡಿಮೆಯಾಗುತ್ತಿದ್ದು ಕಳೆದ ಎರಡು ದಿನಗಳ ಅವಧಿಯಲ್ಲಿ 9 ಅಡಿಗಳಷ್ಟು ನೀರು ಕ್ಷೀಣಿಸಿದೆ. ಇಡೀ ಸಂಚಾರ ವ್ಯವಸ್ಥೆಯನ್ನು ಸ್ಥಬ್ದಗೊಳಿಸು ವದರೊಂದಿಗೆ ಜನಜೀವನ ಅಸ್ತವ್ಯಸ್ಥ ಗೊಳಿಸಿದ್ದ ಕಾವೇರಿ ಶಾಂತವಾಗಿದೆ. ಕುಶಾಲನಗರ ವ್ಯಾಪ್ತಿಯ ಕಾವೇರಿ ನದಿ ತಟದ ಎಲ್ಲಾ ಬಡಾವಣೆಗಳು ನೀರಿ ನಿಂದ ಮುಳುಗಿದ್ದು ಇದೀಗ ಜನ ಜೀವನ ಸಾಮಾನ್ಯ ಸ್ಥಿತಿಗೆ ಮರಳುತ್ತಿದೆ.
ಜಿಲ್ಲಾಡಳಿತ ಸಂತ್ರಸ್ತರಿಗೆ ಸಾಂತ್ವನ ಕೇಂದ್ರಗಳನ್ನು ಆರಂಭಿಸಿದ್ದು ಕುಶಾಲನಗರದ ವಾಸವಿ ಮಹಲ್ ಸಭಾಂಗಣದಲ್ಲಿ ಒಟ್ಟು 267 ಮಂದಿ ಆಶ್ರಯ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇನ್ನುಳಿದಂತೆ ನೂರಾರು ನಾಗರಿಕರು ಬದಲೀ ವ್ಯವಸ್ಥೆ ಕಲ್ಪಿಸಿ ಕೊಂಡಿದ್ದು ತಮ್ಮ ತಮ್ಮ ಮನೆಗಳನ್ನು ಸ್ವಚ್ಛ ಮಾಡುವ ಸಿದ್ಧತೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಪ.ಪಂ. ಮುಖ್ಯಾಧಿಕಾರಿ ಸುಜಯ್‍ಕುಮಾರ್ ನೇತೃತ್ವದಲ್ಲಿ ಪಟ್ಟಣದ ಸ್ವಚ್ಛತಾ ಕಾರ್ಯ ಭರದಿಂದ ಸಾಗುತ್ತಿದೆ. ಅಧಿಕಾರಿಗಳು, ಸಿಬ್ಬಂದಿಗಳು ವಿವಿಧ ಬಡಾವಣೆಗಳಲ್ಲಿ ಜನಪ್ರತಿನಿಧಿಗ ಳೊಂದಿಗೆ ಸಾಗಿ ನಷ್ಟದ ಅಂದಾಜು ಪಟ್ಟಿ ತಯಾರಿಸುತ್ತಿದ್ದಾರೆ.
ನೆರೆಯ ಕೊಪ್ಪ ಗ್ರಾಮದಲ್ಲಿ ಪರಿಹಾರ ಕೇಂದ್ರ ತೆರೆಯಲಾಗಿದೆ.