ಗೋಣಿಕೊಪ್ಪಲು, ಆ. 12: ಕಣ್ಣಂಗಾಲ ಗ್ರಾಮ ಪಂಚಾಯಿತಿ ವತಿಯಿಂದ ತಾ. 14 ರಂದು ಅಮ್ಮತ್ತಿ ಒಂಟಿಯಂಗಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಗ್ರಾಮ ಸಭೆಯನ್ನು ಮುಂದೂಡಲಾಗಿದೆ. ಗ್ರಾಮದಲ್ಲಿ ನೆರೆ ಹಾವಳಿಯಿಂದ ತೊಂದರೆಯಾದ ಹಿನ್ನೆಲೆಯಲ್ಲಿ ಗ್ರಾಮ ಸಭೆಯನ್ನು ಮುಂದೂಡಲಾಗಿದೆ ಎಂದು ಪಂಚಾಯಿತಿ ಪಿಡಿಒ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.