ಮಡಿಕೇರಿ, ಆ. 13: ಹಾಕತ್ತೂರು ಗ್ರಾಮ ಪಂಚಾಯಿತಿಯಲ್ಲಿ ಬಿಲ್ ಕಲೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದ ಪರ್ಲಕೋಟಿ ಸುಗು ರಾಧಾಕೃಷ್ಣ ಮುಂಬಡ್ತಿ ಹೊಂದಿದ ಹಿನ್ನೆಲೆ ಗ್ರಾ.ಪಂ. ಆಡಳಿತ ಮಂಡಳಿ ಹಾಗೂ ನೌಕರರು ಸನ್ಮಾನಿಸಿ, ಬೀಳ್ಕೊಟ್ಟರು. ಹಾಕತ್ತೂರು ಗ್ರಾ.ಪಂ. ಅಧ್ಯಕ್ಷೆ ಮಂದ್ರೀರ ಶಾರದ, ಗ್ರಾಮ ಲೆಕ್ಕಾಧಿಕಾರಿ ರೇವತಿ, ಗ್ರಾ.ಪಂ. ಸದಸ್ಯ ದೇವಿಪ್ರಸಾದ್ ಹಾಗೂ ಪಿಯೂಸ್ ಪೆರೇರಾ ಮಾತನಾಡಿದರು. ಕಾರ್ಯಕ್ರಮದಲ್ಲಿ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮಿ, ಗ್ರಾ.ಪಂ. ಉಪಾಧ್ಯಕ್ಷ ವಿಷ್ಣುಕುಮಾರ್, ಪಿಡಿಓ ದಿನೇಶ್, ಕಂಪ್ಯೂಟರ್ ಆಪರೇಟರ್ ಲೀಲಾ, ಗ್ರಂಥಾಲಯ ಮೇಲ್ವಿಚಾರಕಿ ಸುನಿತಾ ಪ್ರಸಾದ್, ಕಂದಾಯ ಇಲಾಖಾ ಸಿಬ್ಬಂದಿ ಪ್ರಸಾದ್ ಬಿ.ಎನ್, ವಾಟರ್ ಮ್ಯಾನ್ ಸೋವಿಯತ್ ಸೇರಿದಂತೆ ಗ್ರಾ.ಪಂ. ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.