ಗೋಣಿಕೊಪ್ಪ ವರದಿ, ಆ. 13: ತಾ. 15 ರ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಗೋಣಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಆಯೋಜಿಸಿದ್ದ ಸ್ಪಿರಿಟ್ ಆಫ್ ಫ್ರೀಡಂ ರನ್ ಹಾಗೂ ವಿವಿಧ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ.
ಪೊನ್ನಂಪೇಟೆಯಿಂದ ಗೋಣಿಕೊಪ್ಪವರೆಗೆ ನಡೆಯುತ್ತಿದ್ದ ಸ್ಪಿರಿಟ್ ಆಫ್ ರನ್ ಮಳೆಯ ಕಾರಣ ಮುಂದೂಡಲಾಗಿದೆ. ಇದರಂತೆ ಲಯನ್ಸ್ ಶಾಲೆಯಲ್ಲಿ ಆಯೋಜಿಸಿದ್ದ ವೀರಾಜಪೇಟೆ ತಾಲೂಕು ಮಟ್ಟದ ವಾಕ್‍ಚಾತುರ್ಯ, ದೇಶಭಕ್ತಿ ಗೀತೆ, ಸ್ವರಚಿತ ಕವನ ವಾಚನ ಸ್ಪರ್ಧೆಗಳನ್ನು ಕೂಡ ಮುಂದೂಡಲಾಗಿದೆ. ಗಾಂಧಿ ಜಯಂತಿಯಂದು ಈ ಕಾರ್ಯಕ್ರಮ ಗಳನ್ನು ನಡೆಸಲಾಗುವದು ಎಂದು ಲಯನ್ಸ್ ಕ್ಲಬ್ ಕಾರ್ಯದರ್ಶಿ ಡಾ. ಅಮ್ಮಂಡ ಚಿಣ್ಣಪ್ಪ ಹೇಳಿಕೆಯಲ್ಲಿ ತಿಳಿಸಿದ್ದಾರೆ.