ಸೋಮವಾರಪೇಟೆ,ಆ.12: ತಾಲೂಕಿನ ಬೆಟ್ಟದಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀದಳ್ಳಿಯಲ್ಲಿ ಬರೆ ಕುಸಿತ ಉಂಟಾಗಿದ್ದು, ಬೀದಳ್ಳಿ ಗ್ರಾಮ ಸಂಪರ್ಕ ಕಡಿತಗೊಂಡಿದೆ.

ಗ್ರಾಮದ ಕೆ.ಜೆ. ತಮ್ಮಯ್ಯ ಅವರ ಮನೆಯ ಪಕ್ಕದಲ್ಲಿ ಬರೆ ಕುಸಿತ ಉಂಟಾಗಿದ್ದು, ರಸ್ತೆಯ ಮೇಲೆ ಮಣ್ಣು ಸೇರಿರುವದರಿಂದ ಸಂಚಾರ ಸ್ಥಗಿತಗೊಂಡಿದೆ. ಸ್ಥಳಕ್ಕೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ತಮ್ಮಯ್ಯ ಅವರು ಭೇಟಿ ನೀಡಿ ಪರಿಶೀಲಿಸಿದ್ದು, ಮಣ್ಣನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಲು ಕ್ರಮ ಕೈಗೊಂಡಿದ್ದಾರೆ.