ಮಡಿಕೇರಿ, ಆ. 13: ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಹಾನಿಗೋಳಗಾದ ನಷ್ಟದ ಮಾಹಿತಿಯ ಅಂದಾಜು ಪಟ್ಟಿಯನ್ನು ತುರ್ತಾಗಿ ನೀಡುವಂತೆ ಎಲ್ಲಾ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಸೂಚನೆ ನೀಡಿದ್ದಾರೆ. ಎನ್ಡಿಆರ್ಎಫ್/ ಎಸ್ಡಿಆರ್ಅಫ್ ಅಡಿಯಲ್ಲಿ ಅಗತ್ಯ ಹಣವಿದ್ದು, ತುರ್ತು ಕೆಲಸಗಳಿಗೆ ಯಾವದೇ ಕೊರತೆ ಆಗದಂತೆ ಪರಿಹಾರ ಕಾರ್ಯಗಳನ್ನು ಸಮರ್ಪಕವಾಗಿ ನಿರ್ವಾಹಣೆ ಮಾಡುವಂತೆ ಎಲ್ಲಾ ಜಿಲ್ಲಾ ಅಧಿಕಾರಿಗಳಿಗೆ ತಿಳಿಸಿದರು. ಎನ್ಡಿಆರ್ಎಫ್/ ಎಸ್ಡಿಆರ್ಎಫ್ ನಿಯಮಗಳ ಕುರಿತ ಮಾಹಿತಿಯನ್ನು ಅಧಿಕಾರಿಗಳಿಗೆ ನೀಡಲಾಯಿತು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪಿ, ಜಿ.ಪಂ. ಸಿಇಓ ಲಕ್ಷ್ಮೀಪ್ರಿಯಾ, ಅಪರ ಜಿಲ್ಲಾಧಿಕಾರಿ ಡಾ. ಸ್ನೇಹಾ, ಉಪ ವಿಭಾಗಾಧಿಕಾರಿ ಟಿ. ಜವರೇಗೌಡ, ಪ್ರೋಬೇಷನರಿ ಕೆ.ಎಎಸ್ ಅಧಿಕಾರಿಗಳು ವಿವಿಧ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು, ತಹಶೀಲ್ದಾರರು, ತಾ.ಪಂ. ಇಒಗಳು, ಪಟ್ಟಣ ಪಂಚಾಯಿತಿಯ ಮುಖ್ಯ ಅಧಿಕಾರಿಗಳು ಇತರರು ಇದ್ದರು.