ಮಡಿಕೇರಿ, ಆ. 12: ಹೊದ್ದೂರು ಗ್ರಾಮದ ಶ್ರೀ ಧರ್ಮಸ್ಥಳ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ, ಪ್ರಗತಿ ಬಂಧು ಸ್ವಸಹಾಯ ಸಂಘದ ಆಶ್ರಯದಲ್ಲಿ ಸ್ಥಳೀಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಜಾಗೃತಿ ಮತ್ತು ಸಸಿ ನೆಡುವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಕೈಪೆಂಗಡ ರಾಣಿ ಪಾರ್ವತಿ ಅವರು ಗಿಡಕ್ಕೆ ನೀರುಣಿಸುವ ಮೂಲಕ ಚಾಲನೆ ನೀಡಿದರು.
ವೇದಿಕೆಯಲ್ಲಿ ವೀರಾಜಪೇಟೆ ಯೋಜನೆಯ ಕೃಷಿ ಅಧಿಕಾರಿ ಚೇತನ್ ಪರಿಸರದ ಜಾಗೃತಿ ಬಗ್ಗೆ ಮಾಹಿತಿ ನೀಡಿದರು. ಶಾಲಾ ಎಸ್ಡಿಎಂಸಿ ಅಧ್ಯಕ್ಷ ಬಿ. ದೇವಪ್ಪ, ಒಕ್ಕೂಟದ ಮೇಲ್ವಿಚಾರಕಿ ಜಯಶ್ರೀ, ಒಕ್ಕೂಟದ ಅಧ್ಯಕ್ಷೆ ತೆಕ್ಕಡೆ ರಾಜೇಶ್ವರಿ ಉಪಸ್ಥಿತರಿದ್ದರು. ಒಕ್ಕೂಟದ ವಾಟೆಕಾಡು ವಿಭಾಗದ ಸೇವಾ ಪ್ರತಿನಿಧಿ ಕಾವೇರಿ ಸ್ವಾಗತಿಸಿ, ಕೊನೆಯಲ್ಲಿ ಒಕ್ಕೂಟದ ಎ ವಿಭಾಗದ ಸೇವಾ ಪ್ರತಿನಿಧಿ ಮಮ್ತಾಜ್ ವಂದಿಸಿದರು. ಕಾರ್ಯಕ್ರಮದಲ್ಲಿ ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯೆ ಮಂಡೇಪಂಡ ತ್ಯಾಗಿ ಅಪ್ಪಯ್ಯ ಗುಂಪಿನ ಸದಸ್ಯರಿಗೆ ಸಸಿ ವಿತರಿಸಿದರು.