ಮಡಿಕೇರಿ, ಆ. 15: ಕೊಡಗು ಜಿಲ್ಲೆಯ ಎಲ್ಲಾ ಸಮುದಾಯ ಆರೋಗ್ಯ ಕೇಂದ್ರಗಳು, ತಾಲೂಕು ಆಸ್ಪತ್ರೆಗಳು ಹಾಗೂ ವೈದ್ಯಕೀಯ ಕಾಲೇಜುಗಳಲ್ಲಿ ಒಟ್ಟು 13 ಕೌಂಟರ್ ತೆರೆಯಲಾಗಿದ್ದು, ಸಾರ್ವಜನಿಕರು ತಮ್ಮ ಪಡಿತರ ಚೀಟಿ ಹಾಗೂ ಆಧಾರ್ ಕಾರ್ಡ್‍ಗಳೊಂದಿಗೆ ಎ4 ಅಳತೆಯ ಆರೋಗ್ಯ ಕಾರ್ಡ್‍ಗಳಿಗೆ ರೂ. 10 ನ್ನು ಪಾವತಿಸಿ ಹಾಗೂ ಜಿಲ್ಲೆಯಲ್ಲಿರುವ 32 ಸೇವಾ ಸಿಂಧು ಕೌಂಟರ್‍ಗಳಲ್ಲಿ ಎ4 ಅಳತೆಯ ಕಾರ್ಡ್‍ಗಳಿಗೆ ರೂ. 10 ರಂತೆ ಹಾಗೂ ಸ್ಮಾರ್ಟ್ ಕಾರ್ಡ್‍ಗಳಿಗೆ ರೂ. 35 ನ್ನು ಪಾವತಿಸಿ ಆರೋಗ್ಯ ಕಾರ್ಡ್‍ಗಳನ್ನು ಪಡೆಯುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.