ಮಡಿಕೇರಿ, ಆ. 13: ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿ ವತಿಯಿಂದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 348ನೇ ಆರಾಧನೆ ಹಾಗೂ ವರ ಮಹಾಲಕ್ಷ್ಮಿ ಪೂಜೆಯನ್ನು ತಾ. 17 ರಂದು ಬ್ರಾಹ್ಮಣರ ಬೀದಿಯಲ್ಲಿರುವ ಶ್ರೀ ಲಕ್ಷ್ಮಿ ನರಸಿಂಹ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಲಾಗಿದೆ. ಅಂದು ಸಂಜೆ 5.30 ರಿಂದ 7.30 ರವರೆಗೆ ಭಾರತೀಯ ವಿದ್ಯಾಭವನದ ಶಿಕ್ಷಕಿ ವೀಣಾ ಹೊಳ್ಳ ಅವರಿಂದ ಭಕ್ತಿ ವೈವಿಧ್ಯ ಕಾರ್ಯಕ್ರಮ ನಡೆಯಲಿದೆ ಎಂದು ಆಡಳಿತ ಮಂಡಳಿಯವರು ತಿಳಿಸಿದ್ದಾರೆ.