ವೀರಾಜಪೇಟೆ, ಆ. 15: ವೀರಾಜಪೇಟೆಯ ಸಿದ್ದಾಪುರ ರಸ್ತೆಯ ಮಲೆತಿರಿಕೆ ಬೆಟ್ಟದಲ್ಲಿ ದುರಂತ ಸಂಭವಿಸಬಹುದೆಂಬ ಮುನ್ನೆಚ್ಚರಿಕೆ ಕ್ರಮವಾಗಿ ನಿನ್ನೆ ದಿನ ಬೆಟ್ಟದಲ್ಲಿ ವಾಸಿಸುತ್ತಿದ್ದ ಸುಮಾರು 84 ಕುಟುಂಬಗಳ 210ಮಂದಿಯನ್ನು ಇಲ್ಲಿನ ಸಂತ ಅನ್ನಮ್ಮ ಶಾಲೆಯಲ್ಲಿ ತೆರೆಯಲಾದ ಹೊಸ ಪುನರ್ವಸತಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ.

ಎಸ್.ಪಿ ಭೇಟಿ

ಮಲೆತಿರಿಕೆಬೆಟ್ಟಕ್ಕೆ ಇಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪಟ್ಟಣ ಪಂಚಾಯಿತಿ ಸದಸ್ಯ ಡಿ.ಪಿ.ರಾಜೇಶ್, ಸಿ.ಕೆ. ಪೃಥ್ವಿನಾಥ್, ಮಹಮ್ಮದ್ ರಾಫಿ ಮಲೆತಿರಿಕೆ ಬೆಟ್ಟದ ನಿವಾಸಿಗಳು ಇದ್ದರು.