ನಾಪೋಕ್ಲು, ಆ. 15: ಕಳೆದ ವಾರ ಸುರಿದ ಧಾರಾಕಾರ ಮಳೆಯಿಂದಾಗಿ ಬಲ್ಲಮಾವಟಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಪೇರೂರು ಗ್ರಾಮದ ಮಂಜಟ್ ಕಾಲೋನಿಯಲ್ಲಿ ರಸ್ತೆ ಸಂಪೂರ್ಣ ಹಾನಿಗೀಡಾಗಿದ್ದು, ಸಂಚಾರ ಅಸಾಧ್ಯವಾಗಿದೆ. ಗಾಳಿ ಸಹಿತ ಸುರಿದ ಮಳೆಗೆ ಮನೆಗಳ ಸಮೀಪ ಬರೆಕುಸಿತಗೊಂಡ ಪರಿಣಾಮ ಗ್ರಾಮದ ಹಲವು ಮನೆಗಳು ಹಾನಿ ಗೀಡಾಗಿದ್ದು, ಮನೆ ಕಳೆದುಕೊಂಡ ಕುಟುಂಬಗಳು ಬಲ್ಲಮಾವಟಿಯ ಪರಿಹಾರ ಕೇಂದ್ರದಲ್ಲಿ ಆಶ್ರಯ ಪಡೆದಿದ್ದಾರೆ. - ದುಗ್ಗಳ