ಮಡಿಕೇರಿ, ಆ. 15: ಕೊಡಗು ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಇಳಿಮುಖವಾಗಿರುವದರಿಂದ ಪ್ರಕೃತಿ ವಿಕೋಪ ಸಂತ್ರಸ್ತರಿಗೆ ಪರಿಹಾರ ಕೇಂದ್ರಗಳನ್ನು ತೆರೆಯಲಾಗಿರುವ ಅಂಗನವಾಡಿ ಕೇಂದ್ರ ಮತ್ತು ಶಾಲಾ - ಕಾಲೇಜುಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಅಂಗನವಾಡಿ ಕೇಂದ್ರಗಳು ಮತ್ತು ಶಾಲಾ - ಕಾಲೇಜುಗಳು ತಾ. 16 ರಿಂದ (ಇಂದಿನಿಂದ) ಪುನರಾರಂಭ ಗೊಳ್ಳಲಿವೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.