ಸುಂಟಿಕೊಪ್ಪ, ಆ. 14: ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಮತ್ತು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಾ. 15 ರಂದು (ಇಂದು) ಬೆಳಿಗ್ಗೆ 9.30 ಗಂಟೆಗೆ ಸಂತ ಮೇರಿ ಆಂಗ್ಲ ಮಾಧ್ಯಮ ಶಾಲಾ ಆವರಣದಲ್ಲಿ ಗ್ರಾ.ಪಂ. ಅಧ್ಯಕ್ಷೆ ರೋಸ್ ಮೇರಿ ರಾಡ್ರಿಗಸ್ ಅವರ ಅಧ್ಯಕ್ಷತೆಯಲ್ಲಿ ಸ್ವಾತಂತ್ರ್ಯೋತ್ಸವ ನಡೆಯಲಿದೆ. ಸುಂಟಿಕೊಪ್ಪ ಠಾಣಾಧಿಕಾರಿ ಜಯರಾಂ ಸ್ವಾತಂತ್ರ್ಯೋತ್ಸವ ಮಹತ್ವದ ಬಗ್ಗೆ ಮಾತನಾಡಲಿದ್ದಾರೆ. ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸ ಲಾಗುವದು.