ಮಡಿಕೇರಿ, ಆ. 14: ಕೊಡಗು ಜಿಲ್ಲಾಡಳಿತ ವತಿಯಿಂದ 73ನೇ ಸ್ವಾತಂತ್ರ್ಯ ದಿನಾಚರಣೆಯು ತಾ. 15 ರಂದು ಬೆಳಗ್ಗೆ 9 ಗಂಟೆಗೆ ನಗರದ ಕೋಟೆ ಆವರಣದಲ್ಲಿ ನಡೆಯಲಿದೆ. ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಕೆ.ಜಿ. ಬೋಪಯ್ಯ, ಎಂ.ಪಿ. ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ.ಪಿ. ಜಿ.ಪಂ. ಸಿಇಒ ಕೆ. ಲಕ್ಷ್ಮೀಪ್ರಿಯಾ ಇತರರು ಪಾಲ್ಗೊಳ್ಳಲಿದ್ದಾರೆ.