ಮಡಿಕೇರಿ, ಆ. 15: ಪ್ರಸಕ್ತ(2019-20) ಸಾಲಿಗೆ ಮುಖ್ಯಮಂತ್ರಿಯವರ ಉದ್ಯೋಗ ಸೃಜನ ಯೋಜನೆ (ಸಿಎಂಇಜಿಪಿ) ಹಾಗೂ ಪ್ರಧಾನ ಮಂತ್ರಿಯವರ ಉದ್ಯೋಗ ಸೃಜನ ಯೋಜನೆ (ಪಿಎಂಇಜಿಪಿ) ಅತಿ ಸಣ್ಣ ಕೈಗಾರಿಕೆ ಸ್ಥಾಪಿಸಲು ಆರ್ಥಿಕ ಸಹಾಯ ಕೋರಿ ರಾಜ್ಯ ಖಾದಿ ಗ್ರಾಮೋದ್ಯೋಗ ಮಂಡಳಿಗೆ ಜುಲೈ 31 ರವರೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿದ ಪಲಾನುಭವಿಗಳಿಗೆ ತಾ. 27 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾ ಕೈಗಾರಿಕ ಕೇಂದ್ರದ ಕಟ್ಟಡದ ಸಭಾಂಗಣದಲ್ಲಿ ಸಂದರ್ಶನ ನಡೆಯಲಿದೆ.
ಸಂದರ್ಶನಕ್ಕೆ ಭಾಗವಹಿಸುವ ಅರ್ಹ ಅಭ್ಯರ್ಥಿಗಳು ಆನ್ಲೈನ್ನಲ್ಲಿ ಸಲ್ಲಿಸಿದ ಅರ್ಜಿಯೊಂದಿಗೆ 2 ಭಾವಚಿತ್ರ, ವಿದ್ಯಾರ್ಹತೆ ಪ್ರಮಾಣಪತ್ರ, ಜನ್ಮ ದಿನಾಂಕ ಪ್ರಮಾಣ ಪತ್ರ, ಗ್ರಾಮೀಣ ಪ್ರದೇಶದಲ್ಲಿ ಘಟಕ ಸ್ಥಾಪಿಸುವ ಗ್ರಾಮದ ಜನಸಂಖ್ಯೆ ಪ್ರಮಾಣ ಪತ್ರ ಹಾಗೂ ಯೋಜನಾ ವರದಿ ಒಳಗೊಂಡ ಪ್ರಮುಖ ಮೂಲ ಪ್ರತಿಯೊಂದಿಗೆ ದಾಖಲಾತಿಗಳನ್ನು ಎರಡು ಪ್ರತಿಗಳಲ್ಲಿ ಹಾಜರು ಪಡಿಸಬೇಕು. ಹೆಚ್ಚಿನ ವಿವರಗಳಿಗೆ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಜಿಲ್ಲಾ ಕಚೇರಿ, ಜಿಲ್ಲಾ ಕೈಗಾರಿಕ ಕೇಂದ್ರದ ಕಟ್ಟಡ, ಕೊಹಿನೂರು ರಸ್ತೆ, ಮಡಿಕೇರಿ ಇವರ ಕಚೇರಿ ಹಾಗೂ ದೂ.ಸಂ. 08272-225946 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ ತಿಳಿಸಿದ್ದಾರೆ.