ಶನಿವಾರಸಂತೆ, ಆ. 15: 52 ವರ್ಷಗಳ ಹಿಂದೆ ಸ್ಥಾಪಿಸಲ್ಪಟ್ಟ ಕೊಡಗು ಜಿಲ್ಲೆಯ ಕೈಗಾರಿಕಾ ಮಹಾಸಂಸ್ಥೆ ರಾಜ್ಯದಲ್ಲಿ ಮೊದಲ ಸ್ಥಾನ ಪಡೆದಿದ್ದು, 2 ವರ್ಷಗಳ ಹಿಂದೆ ಸುವರ್ಣ ಮಹೋತ್ಸವ ಆಚರಿಸಿಕೊಂಡಿದೆ ಎಂದು ಜಿಲ್ಲಾ ವಾಣಿಜ್ಯೋದ್ಯಮಿಗಳ ಸಂಘ ಹಾಗೂ ಕೈಗಾರಿಕಾ ಮಹಾ ಸಂಸ್ಥೆಯ ಅಧ್ಯಕ್ಷ ಬಿ.ಎನ್. ಪ್ರಕಾಶ್ ಅಭಿಪ್ರಾಯಪಟ್ಟರು.

ಗುಡುಗಳಲೆಯ ಆರ್.ವಿ. ಕಲ್ಯಾಣ ಮಂಟಪದಲ್ಲಿ ನಡೆದ ಶನಿವಾರಸಂತೆಯ ವಾಣಿಜ್ಯೋದ್ಯ ಮಿಗಳ ಸಂಘದ ವಾರ್ಷಿಕ ಮಹಾಸಭೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲಾ ವಾಣಿಜ್ಯೊಧ್ಯಮಿಗಳ ಸಂಘದ ಖಜಾಂಚಿ ರವಿ ಉತ್ತಪ್ಪ ಮಾತನಾಡಿ, ವ್ಯಾಪಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸಂಘದ ಸದಸ್ಯರಾಗಬೇಕು ಎಂದರು. ತಾಲೂಕು ವಾಣಿಜ್ಯೋದ್ಯಮಿಗಳ ಸಂಘದ ಅಧ್ಯಕ್ಷ ಪ್ರಮೋದ್, ಕೊಡ್ಲಿಪೇಟೆ ಸ್ಥಾನೀಯ ಸಮಿತಿ ಅಧ್ಯಕ್ಷ ಯತೀಶ್‍ಕುಮಾರ್, ಶನಿವಾರಸಂತೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ.ಹೆಚ್. ಮಹಮ್ಮದ್ ಗೌಸ್, ಸದಸ್ಯ ಸರ್ದಾರ್ ಅಹಮ್ಮದ್, ದುಂಡಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿ.ಜೆ. ಗಿರೀಶ್, ಸಂಸ್ಥೆಯ ನಿರ್ದೇಶಕ ಪಟ್ಟಾಭಿ ರಾಮ್ ಮಾತನಾಡಿದರು. ನಿರ್ದೇಶಕರು ಹಾಗೂ ಸದಸ್ಯರು ಚರ್ಚೆಯಲ್ಲಿ ಪಾಲ್ಗೊಂಡಿದ್ದರು. ಅಧ್ಯಕ್ಷತೆ ವಹಿಸಿದ್ದ ಶನಿವಾರಸಂತೆ ವಾಣಿಜ್ಯೋದ್ಯಮಿಗಳ ಸಂಘದ ಅಧ್ಯಕ್ಷ ಬಿ.ಎಸ್. ಪ್ರತಾಪ್ ಮಾತನಾಡಿದರು.