ಚೆಟ್ಟಳ್ಳಿ, ಆ. 14: ದಿವಂಗತ ಮಾಜಿ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ಚೆಟ್ಟಳ್ಳಿಯ ಶ್ರೀ ನರೇಂದ್ರ ಮೋದಿ ಭವನದಲ್ಲಿ ಬಿಜೆಪಿ ಸ್ಥಾನೀಯ ಸಮಿತಿ ವತಿಯಿಂದ ಶ್ರದ್ಧಾಂಜಲಿ ಅರ್ಪಿಸಲಾಯಿತು. ಬಿಜೆಪಿ ಸ್ಥಾನೀಯ ಸಮಿತಿ ಅಧ್ಯಕ್ಷ ಬಲ್ಲಾರಂಡ ಕಂಠಿ ಕಾರ್ಯಪ್ಪ, ಬಟ್ಟಿರ ರಕ್ಷು ಕಾಳಪ್ಪ, ತಾಲೂಕು ಪಂಚಾಯಿತಿ ಸದಸ್ಯ ಮಣಿ ಉತ್ತಪ್ಪ, ಗ್ರಾಮ ಪಂಚಾಯಿತಿ ಸದಸ್ಯೆ ಮೇರಿ ಅಂಬುದಾಸ್, ಎನ್.ಎಸ್. ರವಿ, ದೇವಯಾನಿ, ಮಾಯ ಕೃಷ್ಣ, ಜಗತ್, ಹರಿ, ಕಾರ್ಯಕರ್ತರು ಹಾಗೂ ಹಿತೈಷಿಗಳು ಭಾಗವಹಿಸಿದ್ದರು.