ಮಡಿಕೇರಿ, ಆ. 15: ಈ ಬಾರಿಯ ಪ್ರಾಕೃತಿಕ ವಿಕೋಪದಲ್ಲಿ ರಕ್ಷಣಾ ಕಾರ್ಯಕ್ಕೆ ಭಾರತೀಯ ಸೇನಾ ಪಡೆಯೂ ಆಗಮಿಸಿತ್ತು. ಜಿಲ್ಲೆಯಲ್ಲಿ ನಡೆದ ರಕ್ಷಣಾ ಕಾರ್ಯಾಚರಣೆಗೆ 61 ಸೈನಿಕರು ಬಂದಿದ್ದರು. ಅವರ ಸೇವೆಗೆ ಮೆಚ್ಚುಗೆ ವ್ಯಕ್ತಪಡಿಸಿ ಜಿಲ್ಲಾಡಳಿತದ ಪರವಾಗಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪಿ. ಪ್ರಮಾಣಪತ್ರ ವಿತರಿಸಿ ಬೀಳ್ಕೊಟ್ಟರು.