ಕೂಡಿಗೆ, ಆ 15 : ಶಾಸಕ ಎಂ. ಪಿ. ಅಪ್ಪಚ್ಚು ರಂಜನ್ ಅವರು ಮಳೆಯಿಂದ ಹಾನಿಯಾಗಿರುವ ಮುಳ್ಳು ಸೋಗೆ, ಕೂಡಿಗೆಯ ಕೆಲವು ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದÀರ್ಭ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಭಿಮನ್ಯು ಕುಮಾರ, ಜಿಲ್ಲಾ ಪಂಚಾಯತ ಸದಸ್ಯೆ ಮಂಜುಳಾ, ತಾಲೂಕು ಪಂಚಾಯತ್ ಸದಸ್ಯ ಗಣೇಶ ಸೇರಿದಂತೆ ವಿವಿಧ ಘಟಕ ಗಳ ಪ್ರಮುಖರು ಹಾಜರಿದ್ದರು.