ಮಡಿಕೇರಿ, ಆ. 16: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ 6 ರಿಂದ 18 ವರ್ಷದೊಳಗಿನ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ ಬಾಲಕರಿಗೆ “ಹೊಯ್ಸಳ” ಮತ್ತು ಬಾಲಕಿಯರಿಗೆ “ಕೆಳದಿ ಚೆನ್ನಮ್ಮ” ಪ್ರಶಸ್ತಿಯನ್ನು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರದಾನ ಮಾಡುತ್ತದೆ. ಪ್ರಕರಣವು ಜುಲೈ 2018 ರಿಂದ ಆಗಸ್ಟ್ 2018 ರೊಳಗೆ ನಡೆದಿರಬೇಕು. ದಿನಾಂಕ 1.8.2001 ರಂದು ಹಾಗೂ ನಂತರ ಜನಿಸಿದ ಮಕ್ಕಳು ಈ ಪ್ರಶಸ್ತಿಗೆ ಅರ್ಹರಾಗಿರುತ್ತಾರೆ.

ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ ರೂ. 10 ಸಾವಿರಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಒಳಗೊಂಡಿದೆ. 2019ನೇ ಸಾಲಿನ ಪ್ರಶಸ್ತಿಗಾಗಿ ನಿಗದಿಪಡಿಸಿರುವ ಅರ್ಜಿ ನಮೂನೆಯನ್ನು ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚೈನ್‍ಗೇಟ್ ಹತ್ತಿರ, ಮೈಸೂರು ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ (ದೂ. 08272-298379) ಇವರಿಗೆ ತಾ. 31 ರೊಳಗೆ ಸಲ್ಲಿಸತಕ್ಕದ್ದು. ಅರ್ಜಿ ಕನ್ನಡ ಭಾಷೆಯಲ್ಲಿಯೇ ಸಲ್ಲಿಸಬೇಕು ಎಂದು ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಅರುಂಧತಿ ತಿಳಿಸಿದ್ದಾರೆ.