ಮಡಿಕೇರಿ, ಆ.16 : ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು ಸೋಮವಾರಪೇಟೆ ತಾಲೂಕಿನ ನೆಲ್ಲಿಹುದಿಕೇರಿ ಪರಿಹಾರ ಕೇಂದ್ರಕ್ಕೆ ಶುಕ್ರವಾರ ಭೇಟಿ ನೀಡಿ 260 ಮಂದಿ ನಿರಾಶ್ರಿತರಿಗೆ ತಲಾ ರೂ. 10 ಸಾವಿರ ಮೊತ್ತದ ಚೆಕ್ ಹಾಗೂ ಆಹಾರ ಸಾಮಗ್ರಿಯ ಕಿಟ್ಟ್ ಅನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಜಿ.ಪಂ. ಸದಸ್ಯೆ ಸುನಿತಾ, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ತಹಶೀಲ್ದಾರ್ ಗೋವಿಂದರಾಜು ಇತರರು ಇದ್ದರು.