ಮಡಿಕೇರಿ, ಆ. 16 : ಜಿಲ್ಲೆಯಲ್ಲಿ ತಾ. 16 ರಿಂದ 23 ರವರೆಗೆ ಗಣಕಯಂತ್ರ ಶಿಕ್ಷಣ ಪರೀಕ್ಷೆಗಳು ನಗರದ ಶ್ರೀ ಸದ್ಗುರು ಕೈಗಾರಿಕಾ ತರಬೇತಿ ಕೇಂದ್ರ, ಶ್ರೀನಿಕೇತನದಲ್ಲಿ ನಡೆಯುತ್ತಿದೆ. ಈ ಪರೀಕ್ಷಾ ಕೇಂದ್ರದಲ್ಲಿ ಯಾವದೇ ನಿಯಮಬಾಹಿರ ಚಟುವಟಿಕೆ ಹಾಗೂ ಅವ್ಯವಹಾರಗಳಿಲ್ಲದೆ ಸುಗಮವಾಗಿ ಪರೀಕ್ಷೆಗಳನ್ನು ನಡೆಸುವ ಸಲುವಾಗಿ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144 ರಡಿ ದತ್ತವಾದ ಅಧಿಕಾರದಂತೆ 200 ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿರ್ಬಂಧಿತ ಸ್ಥಳ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಆದೇಶ ಹೊರಡಿಸಿದ್ದಾರೆ. ಅಲ್ಲದೆ, ಈ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಜೆರಾಕ್ಸ್ ಅಂಗಡಿಗಳನ್ನು ಮತ್ತು ಸೈಬರ್ ಕೆಫೆಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಆದೇಶಿಸಿದ್ದಾರೆ.