ಮಡಿಕೇರಿ, ಆ. 16 : ಇತ್ತೀಚೆಗೆ ಜಿಲ್ಲೆಯಲ್ಲಿ ಸಂಭವಿಸಿದ ಮಳೆಹಾನಿ ಸಂತ್ರಸ್ತರ ನೆರವಿಗೆ ಮಡಿಕೇರಿ ಕೊಡವ ಸಮಾಜ ಮುಂದಾಗಿದೆ. ಸಮಾಜದ ವತಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 1 ಲಕ್ಷ ರೂ. ಗಳ ಚೆಕ್‍ನ್ನು ಇಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರಿಗೆ ಹಸ್ತಾಂತರಿಸಲಾಯಿತು.

ಇದೇ ಸಂದರ್ಭ ಕೊಡವ ಸಮಾಜದ ಅಧ್ಯಕ್ಷ ಕೊಂಗಂಡ ಎಸ್.ದೇವಯ್ಯ ಅವರು ವೈಯುಕ್ತಿಕವಾಗಿ 10 ಸಾವಿರ ರೂ.ಗಳ ಚೆಕ್‍ನ್ನು ಜಿಲ್ಲಾಧಿಕಾರಿಗಳಿಗೆ ನೀಡಿದರು.

ಸಮಾಜದ ಉಪಾಧ್ಯಕ್ಷ ಮಣವಟ್ಟಿರ ಚಿಣ್ಣಪ್ಪ, ಗೌರವ ಕಾರ್ಯದರ್ಶಿ ಅರೆಯಡ ರಮೇಶ, ಜಂಟಿ ಕಾರ್ಯದರ್ಶಿ ಮಾದೇಟಿರ ಬೆಳ್ಯಪ್ಪ ಹಾಗೂ ಎಲ್ಲಾ ನಿರ್ದೇಶಕರು ಹಾಜರಿದ್ದರು.