ಸೋಮವಾರಪೇಟೆ, ಆ.16: ಕಳೆದ ಏಪ್ರಿಲ್ 2019ರ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೈಕ್ಷಣಿಕ ಜಿಲ್ಲಾವಾರು ಸರಕಾರಿ ಶಾಲೆಗಳ ಪೈಕಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹದಾಯಕವಾಗಿ ನೀಡಲಾಗುವ ಲ್ಯಾಪ್‍ಟಾಪ್‍ನ್ನು ಐಗೂರು ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿನಿ ಎ.ಸುಮಿತ್ರ ಪಡೆದುಕೊಂಡರು. ಶೇಕಡ 95.04 ಅಂಕ ಪಡೆದಿರುವ ಸುಮಿತ್ರ ಕೋಟೆ ಆವರಣದಲ್ಲಿ ನಡೆದ ಸ್ವಾತಂತ್ರೋತ್ಸವ ಸಮಾರಂಭದಲ್ಲಿ ಕೊಡಗು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರಿಂದ ಲ್ಯಾಪ್ ಟಾಪ್ ಪಡೆದುಕೊಂಡರು.ಈ ಸಂದರ್ಭ ವಿಧಾನ ಪರಿಷತ್ ಸದಸ್ಯರಾದ ಶಾಂತೆಯಂಡ ವೀಣಾ ಅಚ್ಚಯ್ಯ, ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ ಪನ್ನೇಕರ್ ಉಪಸ್ಥಿತರಿದ್ದರು.